Skip to content
ಸಂಜೆ ಪ್ರಭ

ಸಂಜೆ ಪ್ರಭ

June 18, 2026
Primary Menu
  • ರಾಜ್ಯ
    • ರಾಜಕೀಯ
    • ಬೆಂಗಳೂರು
  • ಕರಾವಳಿ
    • ಮಂಗಳೂರು
    • ಉಡುಪಿ
  • ರಾಷ್ಟ್ರೀಯ
    • ಜಗತ್ತು
    • ವಿದೇಶ
  • ವ್ಯಾಪಾರ
  • ತಂತ್ರಜ್ಞಾನ ಸುದ್ದಿ
  • ಕ್ರೀಡೆ
    • ಕ್ರಿಕೆಟ್
    • ಫುಟ್ಬಾಲ್
  • ಜೀವನ ಶೈಲಿ
    • ಫ್ಯಾಷನ್
  • ಪ್ರಯಾಣ
  • ಸಿನಿಮಾ
Light/Dark Button
  • ಉಡುಪಿ

ಎಂ.ಜಿ.ಎಂ. ಸಂಧ್ಯಾ ಕಾಲೇಜಿನಲ್ಲಿ ಐಟಿ ಕ್ಲಬ್ ಚಟುವಟಿಕೆಗಳ ಉದ್ಘಾಟನೆ

ಸಂಜೆ ಪ್ರಭ March 9, 2026 (Last updated: March 9, 2026) 1 minute read
WhatsApp Image 2026-03-08 at 9.36.29 AM
ಶೇರ್ ಮಾಡಿ:

ಸಂಜೆ ಪ್ರಭಷಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್ ಸಂಧ್ಯಾ ಕಾಲೇಜು, ಉಡುಪಿ ಇದರ ಐಟಿಕ್ಲಬ್‌ನ 2025–26ನೇ ಶೈಕ್ಷಣಿಕ ಸಾಲಿನ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು ಮಾರ್ಚ್ 5ರಂದು ಮಧ್ಯಾಹ್ನ 2.15ಕ್ಕೆ ಟಿ. ಮೊಹನದಾಸ್ ಪೈ ಪ್ಲಾಟಿನಂ ಜ್ಯುಬಿಲಿ ಬ್ಲಾಕ್‌ ಸಭಾಂಗಣದಲ್ಲಿ ನಡೆಯಿತು.
ಕಾಲೇಜಿನ ಪ್ರಾಂಶುಪಾಲರಾದ ಡಾ.ದೇವಿದಾಸ್ ಎಸ್.ನಾಯಕ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ತಾಂತ್ರಿಕ ಹಾಗೂ ವಿಶ್ಲೇಷಣಾತ್ಮಕ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸಿಕೊಳ್ಳುವುದು ಇಂದಿನ ಐಟಿ ಕ್ಷೇತ್ರದಲ್ಲಿ ಅತ್ಯಂತ ಅಗತ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಮಣಿಪಾಲ ಅಕಾಡೆಮಿ ಆಫ್ ಹೈಯರ್‌ ಎಜುಕೇಶನ್, ಮಣಿಪಾಲದ ಆನ್‌ಲೈನ್ ಶಿಕ್ಷಣ ನಿರ್ದೇಶನಾಲಯದ ಎಂಸಿಎ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಪೂರ್ಣಿಮಾ ಶೆಟ್ಟಿ ಅವರು “Data is the New Oil: Why Every BCA Student Must Understand Analytics” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.
ಬಿಸಿಎ ಸಂಯೋಜಕರಾದ ಡಾ.ಎಂ.ವಿಶ್ವನಾಥ ಪೈ ಅವರು ಕೃತಕ ಬುದ್ಧಿಮತ್ತೆಯ ಮಹತ್ವ ಮತ್ತು ಅದರ ಶಿಕ್ಷಣ, ವ್ಯಾಪಾರ ಹಾಗೂ ತಂತ್ರಜ್ಞಾನ ಕ್ಷೇತ್ರಗಳ ಮೇಲೆ ಇರುವ ಪ್ರಭಾವದ ಬಗ್ಗೆ ಮಾತನಾಡಿದರು.


ಬಿಬಿಎ ಮತ್ತು ಬಿಕಾಂ ಸಂಯೋಜಕರಾದ ಡಾ.ಮಲ್ಲಿಕಾ.ಎ.ಶೆಟ್ಟಿ, ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥೆ ಡಾ.ರೇಖಾ ಎನ್. ಚಂದ್ರ ಮುಂತಾದವರು ಉಪಸ್ಥಿತರಿದ್ದರು. ಐಟಿ ಕ್ಲಬ್ ಸಂಯೋಜಕಿ ಅಂಜಲಿನ್‌ ಜೊವಿಟಾ ಅತಿಥಿಗಳನ್ನು ಸ್ವಾಗತಿಸಿದರು. ಐಟಿ ಕ್ಲಬ್ ಕಾರ್ಯದರ್ಶಿ ದರ್ಶನ್ ಅತಿಥಿಗಳನ್ನು ಪರಿಚಯಿಸಿದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕಿ ಅನ್ವಿತಾ ವಂದನಾರ್ಪಣೆ ಸಲ್ಲಿಸಿದರು. ದ್ವಿತೀಯ ಬಿಸಿಎ ವಿದ್ಯಾರ್ಥಿನಿ ಉನ್ನತಿ ಕಾರ್ಯಕ್ರಮ ನಿರೂಪಿಸಿದರು.

ಶೇರ್ ಮಾಡಿ:

Post navigation

Previous: ಕೋಟ ಶ್ರೀನಿವಾಸ ಪೂಜಾರಿಯವರಿಂದ ಕರಾವಳಿ ಜಂಕ್ಷನ್ ನಿಂದ ಕಲ್ಮಾಡಿವರೆಗೆ ರಸ್ತೆ ಕಾಮಗಾರಿ ವೀಕ್ಷಣೆ
Next: ಉಡುಪಿ ಮಲಬಾರ್ ಗೋಲ್ದ್ ನಲ್ಲಿ ಮಹಿಳಾ ದಿನಾಚರಣೆ – ಸಾಧಕರಿಗೆ ಸನ್ಮಾನ

Related Stories

WhatsApp Image 2026-03-09 at 12.31.28 AM
  • ಉಡುಪಿ

ಉಡುಪಿ ಮಲಬಾರ್ ಗೋಲ್ದ್ ನಲ್ಲಿ ಮಹಿಳಾ ದಿನಾಚರಣೆ – ಸಾಧಕರಿಗೆ ಸನ್ಮಾನ

ಸಂಜೆ ಪ್ರಭ March 9, 2026
WhatsApp Image 2026-03-07 at 11.26.12 PM
  • ಉಡುಪಿ

ಕೋಟ ಶ್ರೀನಿವಾಸ ಪೂಜಾರಿಯವರಿಂದ ಕರಾವಳಿ ಜಂಕ್ಷನ್ ನಿಂದ ಕಲ್ಮಾಡಿವರೆಗೆ ರಸ್ತೆ ಕಾಮಗಾರಿ ವೀಕ್ಷಣೆ

ಸಂಜೆ ಪ್ರಭ March 9, 2026
WhatsApp Image 2026-03-07 at 11.14.32 PM
  • ಉಡುಪಿ

ಸಮಾಜ ಸೇವಕಿ ವೀಣಾ ಎಸ್. ಶೆಟ್ಟಿಗೆ “ವೀರವನಿತೆ-2026” ಪ್ರಶಸ್ತಿ ಪ್ರದಾನ

ಸಂಜೆ ಪ್ರಭ March 9, 2026

ಫಾಲೌ ಮಾಡಿ

  • ಪರಿಸರ ಉಳಿಸುವುದು ನಮ್ಮ ಕರ್ತವ್ಯ- ರೇವತಿ ಕಾಮತ್
  • ಗಾಂಧಿನಗರ ಹೊಸಕೆರೆಗೆ ಶೀಘ್ರ ಕಾಯಕಲ್ಪ ದೊರೆಯದಿದ್ದರೆ ಉಪವಾಸ ಸತ್ಯಾಗ್ರಹ-ಸ್ಥಳೀಯ ನಿವಾಸಿಗಳ ಆಕ್ರೋಶ
  • ಉಡುಪಿ ಮಲಬಾರ್ ಗೋಲ್ದ್ ನಲ್ಲಿ ಮಹಿಳಾ ದಿನಾಚರಣೆ – ಸಾಧಕರಿಗೆ ಸನ್ಮಾನ
  • ಎಂ.ಜಿ.ಎಂ. ಸಂಧ್ಯಾ ಕಾಲೇಜಿನಲ್ಲಿ ಐಟಿ ಕ್ಲಬ್ ಚಟುವಟಿಕೆಗಳ ಉದ್ಘಾಟನೆ
  • ಕೋಟ ಶ್ರೀನಿವಾಸ ಪೂಜಾರಿಯವರಿಂದ ಕರಾವಳಿ ಜಂಕ್ಷನ್ ನಿಂದ ಕಲ್ಮಾಡಿವರೆಗೆ ರಸ್ತೆ ಕಾಮಗಾರಿ ವೀಕ್ಷಣೆ

ಹಳೆಯ ಸುದ್ದಿ

WhatsApp Image 2026-03-09 at 12.51.01 AM
  • ಬೆಂಗಳೂರು

ಪರಿಸರ ಉಳಿಸುವುದು ನಮ್ಮ ಕರ್ತವ್ಯ- ರೇವತಿ ಕಾಮತ್

ಸಂಜೆ ಪ್ರಭ March 9, 2026
WhatsApp Image 2026-03-09 at 12.39.13 AM
  • ಬೆಂಗಳೂರು

ಗಾಂಧಿನಗರ ಹೊಸಕೆರೆಗೆ ಶೀಘ್ರ ಕಾಯಕಲ್ಪ ದೊರೆಯದಿದ್ದರೆ ಉಪವಾಸ ಸತ್ಯಾಗ್ರಹ-ಸ್ಥಳೀಯ ನಿವಾಸಿಗಳ ಆಕ್ರೋಶ

ಸಂಜೆ ಪ್ರಭ March 9, 2026
WhatsApp Image 2026-03-09 at 12.31.28 AM
  • ಉಡುಪಿ

ಉಡುಪಿ ಮಲಬಾರ್ ಗೋಲ್ದ್ ನಲ್ಲಿ ಮಹಿಳಾ ದಿನಾಚರಣೆ – ಸಾಧಕರಿಗೆ ಸನ್ಮಾನ

ಸಂಜೆ ಪ್ರಭ March 9, 2026
WhatsApp Image 2026-03-08 at 9.36.29 AM
  • ಉಡುಪಿ

ಎಂ.ಜಿ.ಎಂ. ಸಂಧ್ಯಾ ಕಾಲೇಜಿನಲ್ಲಿ ಐಟಿ ಕ್ಲಬ್ ಚಟುವಟಿಕೆಗಳ ಉದ್ಘಾಟನೆ

ಸಂಜೆ ಪ್ರಭ March 9, 2026
  • Facebook
  • X
  • YouTube
  • Instagram

Contact Us | About Us | Privacy Policy | Terms of Use

Address: Venkatesh Pai
No. 2068, 8th Main
‘E’ Block, Rajaji Nagar II Stage,
Bangalore – 560010
Karnataka
Email: sanjeprabha@gmail.com
Phone No: +91 98864 96677

[gigatech_copy_rights] | ReviewNews by AF themes.