Skip to content
ಸಂಜೆ ಪ್ರಭ

ಸಂಜೆ ಪ್ರಭ

June 18, 2026
Primary Menu
  • ರಾಜ್ಯ
    • ರಾಜಕೀಯ
    • ಬೆಂಗಳೂರು
  • ಕರಾವಳಿ
    • ಮಂಗಳೂರು
    • ಉಡುಪಿ
  • ರಾಷ್ಟ್ರೀಯ
    • ಜಗತ್ತು
    • ವಿದೇಶ
  • ವ್ಯಾಪಾರ
  • ತಂತ್ರಜ್ಞಾನ ಸುದ್ದಿ
  • ಕ್ರೀಡೆ
    • ಕ್ರಿಕೆಟ್
    • ಫುಟ್ಬಾಲ್
  • ಜೀವನ ಶೈಲಿ
    • ಫ್ಯಾಷನ್
  • ಪ್ರಯಾಣ
  • ಸಿನಿಮಾ
Light/Dark Button
  • ಬೆಂಗಳೂರು

ಗಾಂಧಿನಗರ ಹೊಸಕೆರೆಗೆ ಶೀಘ್ರ ಕಾಯಕಲ್ಪ ದೊರೆಯದಿದ್ದರೆ ಉಪವಾಸ ಸತ್ಯಾಗ್ರಹ-ಸ್ಥಳೀಯ ನಿವಾಸಿಗಳ ಆಕ್ರೋಶ

ಸಂಜೆ ಪ್ರಭ March 9, 2026
WhatsApp Image 2026-03-09 at 12.39.13 AM
ಶೇರ್ ಮಾಡಿ:

ಸಂಜೆ ಪ್ರಭ ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದ ವಳಗೇರಹಳ್ಳಿ ಗಾಂಧಿನಗರ ಹೊಸಕೆರೆಗೆ ಶೀಘ್ರ ಕಾಯಕಲ್ಪ ದೊರೆಯಬೇಕು. ತಪ್ಪಿದಲ್ಲಿ ಉಪವಾಸ ಸತ್ಯಾಗ್ರಹ ಮಾಡಲಾಗುವುದು ಎಂದು ಉಪನಗರ ನಿವಾಸಿಗಳು ಬಿಡಬ್ಲ್ಯೂ ಎಸ್ ಎಸ್ ಬಿ ಅಧಿಕಾರಿಗಳಿಗೆ ತಾಕೀತು ಮಾಡಿದರು.
ವಳಗೇರಹಳ್ಳಿ ನಿವಾಸಿಗಳ ಒಕ್ಕೂಟವು ವಳಗೇರಹಳ್ಳಿ ಗಾಂಧಿನಗರ ಹೊಸಕೆರೆಯ ದುರವಸ್ಥೆ ಸರಿ ಪಡಿಸುವಂತೆ ಕೋರಿ ಜಿಬಿಎ ಮುಖ್ಯ ಆಯುಕ್ತರಿಗೆ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ, ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದ ಬಿಡಬ್ಲ್ಯೂಎಸ್ಎಸ್ ಬಿ ಸೂಪರಿಟೆಂಡೆಂಟ್ ಇಂಜಿನಿಯರ್ ಬಿಂದುರವರ ತಂಡ ಜನರ ಆಕ್ರೋಶಕ್ಕೆ ತುತ್ತಾಗುವಂತಾಯಿತು.
ಕೆರೆ ಅಭಿವೃದ್ಧಿಗೆ ಹಂತಹಂತವಾಗಿ 19 ಕೋಟಿ ರೂಪಾಯಿಗೂ ಹೆಚ್ಚು ಹಣ ವೆಚ್ಚ ಮಾಡಲಾಗಿದೆಯಾದರೂ, ಕೆರೆ ಅಭಿವೃದ್ಧಿ ಮರೀಚಿಕೆಯಾಗಿದೆ. ಕೆರೆ ಮಧ್ಯದಲ್ಲೇ ಅಳವಡಿಸಲಾಗಿರುವ ಒಳ ಚರಂಡಿ ನೀರಿನ ಪೈಪ್ ಲೈನ್ ಒಡೆದು ಹೋಗಿದ್ದು, ಆ ಜಾಗದ ಮೂಲಕ ಕೆರೆ ನೀರು ಪೋಲಾಗುತ್ತಿದೆ. ಹೀಗಾಗಿ ಕೆರೆ ಸಂಪೂರ್ಣವಾಗಿ ಬತ್ತಿ ಹೋಗಿದ್ದು, ಅಂತರ್ಜಲ ಮಟ್ಟ ಕುಸಿಯುತ್ತಿದೆ. ಸುತ್ತ ಮುತ್ತಲ ಬೋರ್ ವೆಲ್ ಕೂಡ ಬತ್ತಿ ಹೋಗುತ್ತಿದ್ದು, ನೀರಿನ ಸಮಸ್ಯೆ ಕಾಡುತ್ತಿದೆ ಎಂದು ಒಕ್ಕೂಟದ ಅಧ್ಯಕ್ಷ ಎನ್.ಕದರಪ್ಪ ದೂರಿದರು.
ಒಳ ಚರಂಡಿ ನೀರು ಕೆರೆ ಸೇರುತ್ತಿರುವುದರಿಂದ ಕೆಟ್ಟ ವಾಸನೆ ಹೊರ ಹೊಮ್ಮುತ್ತಿದೆ ಎಂದು ಸ್ಥಳೀಯ ನಿವಾಸಿ ಲಕ್ಷ್ಮಿ ಬೇಸರ ವ್ಯಕ್ತ ಪಡಿಸಿದರು.
ಬಿ ಡಬ್ಲ್ಯೂ ಎಸ್ ಎಸ್ ಬಿ ಸೂಪರಿಟೆಂಡೆಂಟ್ ಇಂಜಿನಿಯರ್ ಬಿಂದು ಮಾತನಾಡಿ, ಗಾಂಧಿನಗರ ಹೊಸಕೆರೆ ಕೆರೆಯನ್ನು ಸೆಪ್ಟೆಂಬರ್
ಅಂತ್ಯದ ವೇಳೆಗೆ ಪುನಶ್ಚೇತನಗೊಳಿಸಲಾಗುವುದು. ಕೆರೆ ಅಭಿವೃದ್ಧಿ ಕಾಮಗಾರಿ ಈಗಾಗಲೇ ಚಾಲನೆಯಲ್ಲಿದೆ. ಕೆರೆ ಮಧ್ಯ ಭಾಗದಲ್ಲಿ ಹಾದು ಹೋಗಿರುವ ಒಳ ಚರಂಡಿ ಪೈಪ್ ಲೈನ್ ಸಂಪರ್ಕವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ, ಕೆರೆ ಅಂಚಿನಲ್ಲಿ ಹೊಸ ಪೈಪ್ ಅಳವಡಿಸಲಾಗುವುದು. ಒಳ ಚರಂಡಿ ನೀರು ಕೆರೆಗೆ ಸೇರದಂತೆ ಶಾಶ್ವತ ಕಾಮಗಾರಿ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.
ಎಇಇ ಶಶಿಕುಮಾರ್, ಎಇ ಜಗದೀಶ್, ಎಇ ಬಸವರಾಜ್,
ವಲಗೇರಹಳ್ಳಿ ಒಕ್ಕೂಟದ ಸದಸ್ಯರು, ಸ್ಥಳೀಯ ನಿವಾಸಿಗಳು,
ಉಪಸ್ಥಿತರಿದ್ದರು.

ಚಿತ್ರ : ವಳಗೇರಹಳ್ಳಿ ಗಾಂಧಿನಗರ ಹೊಸಕೆರೆಗೆ ಬಿ ಡಬ್ಲ್ಯೂ ಎಸ್ ಎಸ್ ಬಿ ಅಧಿಕಾರಿಗಳು ಭೇಟಿ ನೀಡಿದರು.

ಶೇರ್ ಮಾಡಿ:

Post navigation

Previous: ಉಡುಪಿ ಮಲಬಾರ್ ಗೋಲ್ದ್ ನಲ್ಲಿ ಮಹಿಳಾ ದಿನಾಚರಣೆ – ಸಾಧಕರಿಗೆ ಸನ್ಮಾನ
Next: ಪರಿಸರ ಉಳಿಸುವುದು ನಮ್ಮ ಕರ್ತವ್ಯ- ರೇವತಿ ಕಾಮತ್

Related Stories

WhatsApp Image 2026-03-09 at 12.51.01 AM
  • ಬೆಂಗಳೂರು

ಪರಿಸರ ಉಳಿಸುವುದು ನಮ್ಮ ಕರ್ತವ್ಯ- ರೇವತಿ ಕಾಮತ್

ಸಂಜೆ ಪ್ರಭ March 9, 2026

ಫಾಲೌ ಮಾಡಿ

  • ಪರಿಸರ ಉಳಿಸುವುದು ನಮ್ಮ ಕರ್ತವ್ಯ- ರೇವತಿ ಕಾಮತ್
  • ಗಾಂಧಿನಗರ ಹೊಸಕೆರೆಗೆ ಶೀಘ್ರ ಕಾಯಕಲ್ಪ ದೊರೆಯದಿದ್ದರೆ ಉಪವಾಸ ಸತ್ಯಾಗ್ರಹ-ಸ್ಥಳೀಯ ನಿವಾಸಿಗಳ ಆಕ್ರೋಶ
  • ಉಡುಪಿ ಮಲಬಾರ್ ಗೋಲ್ದ್ ನಲ್ಲಿ ಮಹಿಳಾ ದಿನಾಚರಣೆ – ಸಾಧಕರಿಗೆ ಸನ್ಮಾನ
  • ಎಂ.ಜಿ.ಎಂ. ಸಂಧ್ಯಾ ಕಾಲೇಜಿನಲ್ಲಿ ಐಟಿ ಕ್ಲಬ್ ಚಟುವಟಿಕೆಗಳ ಉದ್ಘಾಟನೆ
  • ಕೋಟ ಶ್ರೀನಿವಾಸ ಪೂಜಾರಿಯವರಿಂದ ಕರಾವಳಿ ಜಂಕ್ಷನ್ ನಿಂದ ಕಲ್ಮಾಡಿವರೆಗೆ ರಸ್ತೆ ಕಾಮಗಾರಿ ವೀಕ್ಷಣೆ

ಹಳೆಯ ಸುದ್ದಿ

WhatsApp Image 2026-03-09 at 12.51.01 AM
  • ಬೆಂಗಳೂರು

ಪರಿಸರ ಉಳಿಸುವುದು ನಮ್ಮ ಕರ್ತವ್ಯ- ರೇವತಿ ಕಾಮತ್

ಸಂಜೆ ಪ್ರಭ March 9, 2026
WhatsApp Image 2026-03-09 at 12.39.13 AM
  • ಬೆಂಗಳೂರು

ಗಾಂಧಿನಗರ ಹೊಸಕೆರೆಗೆ ಶೀಘ್ರ ಕಾಯಕಲ್ಪ ದೊರೆಯದಿದ್ದರೆ ಉಪವಾಸ ಸತ್ಯಾಗ್ರಹ-ಸ್ಥಳೀಯ ನಿವಾಸಿಗಳ ಆಕ್ರೋಶ

ಸಂಜೆ ಪ್ರಭ March 9, 2026
WhatsApp Image 2026-03-09 at 12.31.28 AM
  • ಉಡುಪಿ

ಉಡುಪಿ ಮಲಬಾರ್ ಗೋಲ್ದ್ ನಲ್ಲಿ ಮಹಿಳಾ ದಿನಾಚರಣೆ – ಸಾಧಕರಿಗೆ ಸನ್ಮಾನ

ಸಂಜೆ ಪ್ರಭ March 9, 2026
WhatsApp Image 2026-03-08 at 9.36.29 AM
  • ಉಡುಪಿ

ಎಂ.ಜಿ.ಎಂ. ಸಂಧ್ಯಾ ಕಾಲೇಜಿನಲ್ಲಿ ಐಟಿ ಕ್ಲಬ್ ಚಟುವಟಿಕೆಗಳ ಉದ್ಘಾಟನೆ

ಸಂಜೆ ಪ್ರಭ March 9, 2026
  • Facebook
  • X
  • YouTube
  • Instagram

Contact Us | About Us | Privacy Policy | Terms of Use

Address: Venkatesh Pai
No. 2068, 8th Main
‘E’ Block, Rajaji Nagar II Stage,
Bangalore – 560010
Karnataka
Email: sanjeprabha@gmail.com
Phone No: +91 98864 96677

[gigatech_copy_rights] | ReviewNews by AF themes.