Skip to content
ಸಂಜೆ ಪ್ರಭ

ಸಂಜೆ ಪ್ರಭ

June 18, 2026
Primary Menu
  • ರಾಜ್ಯ
    • ರಾಜಕೀಯ
    • ಬೆಂಗಳೂರು
  • ಕರಾವಳಿ
    • ಮಂಗಳೂರು
    • ಉಡುಪಿ
  • ರಾಷ್ಟ್ರೀಯ
    • ಜಗತ್ತು
    • ವಿದೇಶ
  • ವ್ಯಾಪಾರ
  • ತಂತ್ರಜ್ಞಾನ ಸುದ್ದಿ
  • ಕ್ರೀಡೆ
    • ಕ್ರಿಕೆಟ್
    • ಫುಟ್ಬಾಲ್
  • ಜೀವನ ಶೈಲಿ
    • ಫ್ಯಾಷನ್
  • ಪ್ರಯಾಣ
  • ಸಿನಿಮಾ
Light/Dark Button
  • ಉಡುಪಿ
  • ಕರಾವಳಿ
  • ಮಂಗಳೂರು

​ಪತ್ರಕರ್ತ ಹೆಸರಿನಲ್ಲಿ ಬ್ಲಾಕ್‌ಮೇಲ್ ದಂಧೆಗೆ ಕಡಿವಾಣ ಅಗತ್ಯ- ಶಿವಾನಂದ ತಗಡೂರು

ಸಂಜೆ ಪ್ರಭ March 9, 2026 (Last updated: March 11, 2026) 1 minute read
WhatsApp Image 2026-03-07 at 5.22.14 PM
ಶೇರ್ ಮಾಡಿ:

ಸಂಜೆ ಪ್ರಭ ಉಡುಪಿ: ಇತ್ತೀಚಿನ ದಿನಗಳಲ್ಲಿ “ಪತ್ರಕರ್ತ” ಎಂಬ ಲೇಬಲ್ ಇಟ್ಟುಕೊಂಡು ಕೆಲವರು ಬ್ಲ್ಯಾಕ್‌ಮೇಲ್ ದಂಧೆ ಹಾಗೂ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದೆ. ಇದಕ್ಕೆ ಕಡಿವಾಣ ಹಾಕುವ ಕಾರ್ಯವನ್ನು ನಾವು ಮಾಡಬೇಕು. ಇಲ್ಲದಿದ್ದರೆ ಪತ್ರಕರ್ತರಿಗೆ ಈ ಸಮಾಜದಲ್ಲಿ ಗೌರವ ಸಿಗಲು ಸಾಧ್ಯವಿಲ್ಲ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಹೇಳಿದರು.


ಉಡುಪಿಯ ಬ್ರಹ್ಮಗಿರಿಯ ಐಎಂಎ ಭವನದಲ್ಲಿ 07-03-2026 ರ ಶನಿವಾರ ಆಯೋಜಿಸಿದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿ ಮತ್ತು ಕಾರ್ಕಳ, ಕುಂದಾಪುರ, ಬೈಂದೂರು, ಕಾಪು, ಬ್ರಹ್ಮಾವರ, ಹೆಬ್ರಿ ತಾಲೂಕು ಘಟಕಗಳ 2025–28ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಪತ್ರಕರ್ತರು ಮಾಡುವ ಸುದ್ದಿಯಿಂದ ಸಮಾಜಕ್ಕೆ ಪ್ರಯೋಜನವಾದರೆ ಮಾತ್ರ ಈ ವೃತ್ತಿ ಸಾರ್ಥಕ ಎನಿಸುತ್ತದೆ. ಇಂದಿನ ಮಾಧ್ಯಮಗಳು ಸಮಾಜದ ಅಸಮತೋಲನಗಳನ್ನು ತಿದ್ದುವ ಸುದ್ದಿಗಳಿಗಿಂತ “ಸ್ಟೇಟ್‌ಮೆಂಟ್ ಓರಿಯೆಂಟೆಡ್” ಸುದ್ದಿಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿರುವುದು ಕಂಡುಬರುತ್ತಿದೆ. ಇದಕ್ಕೆ ಕಡಿವಾಣ ಹಾಕಿ ಜನಪರ ಸುದ್ದಿಗಳತ್ತ ಗಮನ ಹರಿಸಬೇಕು. ವರದಿ ಮಾಡುವಾಗ ಸಾಮಾಜಿಕ ಪ್ರಜ್ಞೆ ಕೂಡ ಪತ್ರಕರ್ತರಿಗೆ ಅತ್ಯಂತ ಮುಖ್ಯವಾಗಿದೆ. ಸಮಾಜವು ಪತ್ರಕರ್ತರನ್ನು ಬಹಳ ಜವಾಬ್ದಾರಿಯುತ ಸ್ಥಾನದಲ್ಲಿ ಇಟ್ಟಿದೆ. ಆ ನಂಬಿಕೆಯನ್ನು ಉಳಿಸಿಕೊಳ್ಳಬೇಕು. ಪತ್ರಕರ್ತರು ಎಚ್ಚರಿಕೆಯಿಂದ ಮತ್ತು ಜಾಗೃತಿಯಿಂದ ಕಾರ್ಯನಿರ್ವಹಿಸಬೇಕು. ಪತ್ರಕರ್ತನ ಬರವಣಿಗೆಯಷ್ಟೇ ಅಲ್ಲ, ಅವರ ನಡೆನುಡಿಗಳೂ ಮುಖ್ಯವಾಗಿವೆ. ಪತ್ರಕರ್ತರ ವೃತ್ತಿಯನ್ನು ಸ್ವೀಕರಿಸಿದ ನಂತರ ಅದಕ್ಕೆ ತಕ್ಕಂತೆ ನಡೆದುಕೊಳ್ಳುವುದು ಮತ್ತು ವೃತ್ತಿ ಮನೋಭಾವ ರೂಢಿಸಿಕೊಳ್ಳುವುದು ಅಗತ್ಯ. ಈ ನಿಟ್ಟಿನಲ್ಲಿ ಸಂಘ ಕೂಡ ಕಾರ್ಯನಿರ್ವಹಿಸಬೇಕು ಎಂದು ಅವರು ಕಿವಿಮಾತು ಹೇಳಿದರು.
ಸಂಘದ ನೂತನ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಂಘದ ಉಸ್ತುವಾರಿ ಹಾಗೂ ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಮತ್ತು ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಮಾತನಾಡಿದರು.
ಈ ಸಂದರ್ಭದಲ್ಲಿ ಸಂಘದ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡುವ ಮಾಸಿಕ ಪತ್ರಿಕೆ “ಸನ್ಮತಿ” ಯನ್ನು ರಾಜ್ಯಾಧ್ಯಕ್ಷರು ಬಿಡುಗಡೆಗೊಳಿಸಿದರು. ಸಂಘದ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ರಾಜ್ಯ ಸಮಿತಿ ಸದಸ್ಯ ಅಸ್ಟ್ರೋ ಮೊಹನ್, ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು ಹಾಗೂ ಜಿಲ್ಲಾ ಸಂಘದ ಕೋಶಾಧಿಕಾರಿ ಹರೀಶ್ ಕುಂದರ್ ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರು ಸೇರಿದಂತೆ ಜಿಲ್ಲೆ ಮತ್ತು ತಾಲೂಕು ಘಟಕಗಳ ನೂತನ ಪದಾಧಿಕಾರಿಗಳಿಗೆ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಲಕ್ಷ್ಮೀ ಮಚ್ಚಿನ, ಜಿಲ್ಲಾ ಸ್ಕೌಟ್ ಆಯುಕ್ತರಾಗಿ ಆಯ್ಕೆಯಾದ ಜನಾರ್ದನ ಕೊಡವೂರು ಹಾಗೂ ವೀರ ರಾಣಿ ಅಬ್ಬಕ್ಕ ಪ್ರಶಸ್ತಿ ಪುರಸ್ಕೃತೆ ಯಶೋಧಾ ಕೇಶವ್ ಅವರನ್ನು ಸನ್ಮಾನಿಸಲಾಯಿತು.
ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನೂತನ ಪದಾಧಿಕಾರಿಗಳ ಪಟ್ಟಿಯನ್ನು ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಅಜಿತ್ ಆರಾಡಿ ವಾಚಿಸಿದರು. ರಾಮಾಂಜಿ ನಮ್ಮಭೂಮಿ ಆಶಯಗೀತೆ ಹಾಡಿದರು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಚೇತನ್ ಮಟಪಾಡಿ ವಂದಿಸಿದರು. ಪತ್ರಕರ್ತ ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು.

ಸ್ಕೌಟ್ ಆಯುಕ್ತರಾಗಿ ಆಯ್ಕೆಯಾದ ಜನಾರ್ದನ್ ಕೊಡವೂರು ಇವರನ್ನು ಅಭಿನಂದಿಸಲಾಯಿತು.

ಶೇರ್ ಮಾಡಿ:

Post navigation

Next: ಮಣಿಪಾಲದಲ್ಲಿ ದಶಕಗಳ ಬೇಡಿಕೆಯಾದ ಅಗ್ನಿಶಾಮಕ ವಿಭಾಗ ಕಟ್ಟಡಕ್ಕೆ ಶಂಕುಸ್ಥಾಪನೆ

Related Stories

WhatsApp Image 2026-03-09 at 12.31.28 AM
  • ಉಡುಪಿ

ಉಡುಪಿ ಮಲಬಾರ್ ಗೋಲ್ದ್ ನಲ್ಲಿ ಮಹಿಳಾ ದಿನಾಚರಣೆ – ಸಾಧಕರಿಗೆ ಸನ್ಮಾನ

ಸಂಜೆ ಪ್ರಭ March 9, 2026
WhatsApp Image 2026-03-08 at 9.36.29 AM
  • ಉಡುಪಿ

ಎಂ.ಜಿ.ಎಂ. ಸಂಧ್ಯಾ ಕಾಲೇಜಿನಲ್ಲಿ ಐಟಿ ಕ್ಲಬ್ ಚಟುವಟಿಕೆಗಳ ಉದ್ಘಾಟನೆ

ಸಂಜೆ ಪ್ರಭ March 9, 2026
WhatsApp Image 2026-03-07 at 11.26.12 PM
  • ಉಡುಪಿ

ಕೋಟ ಶ್ರೀನಿವಾಸ ಪೂಜಾರಿಯವರಿಂದ ಕರಾವಳಿ ಜಂಕ್ಷನ್ ನಿಂದ ಕಲ್ಮಾಡಿವರೆಗೆ ರಸ್ತೆ ಕಾಮಗಾರಿ ವೀಕ್ಷಣೆ

ಸಂಜೆ ಪ್ರಭ March 9, 2026

ಫಾಲೌ ಮಾಡಿ

  • ಪರಿಸರ ಉಳಿಸುವುದು ನಮ್ಮ ಕರ್ತವ್ಯ- ರೇವತಿ ಕಾಮತ್
  • ಗಾಂಧಿನಗರ ಹೊಸಕೆರೆಗೆ ಶೀಘ್ರ ಕಾಯಕಲ್ಪ ದೊರೆಯದಿದ್ದರೆ ಉಪವಾಸ ಸತ್ಯಾಗ್ರಹ-ಸ್ಥಳೀಯ ನಿವಾಸಿಗಳ ಆಕ್ರೋಶ
  • ಉಡುಪಿ ಮಲಬಾರ್ ಗೋಲ್ದ್ ನಲ್ಲಿ ಮಹಿಳಾ ದಿನಾಚರಣೆ – ಸಾಧಕರಿಗೆ ಸನ್ಮಾನ
  • ಎಂ.ಜಿ.ಎಂ. ಸಂಧ್ಯಾ ಕಾಲೇಜಿನಲ್ಲಿ ಐಟಿ ಕ್ಲಬ್ ಚಟುವಟಿಕೆಗಳ ಉದ್ಘಾಟನೆ
  • ಕೋಟ ಶ್ರೀನಿವಾಸ ಪೂಜಾರಿಯವರಿಂದ ಕರಾವಳಿ ಜಂಕ್ಷನ್ ನಿಂದ ಕಲ್ಮಾಡಿವರೆಗೆ ರಸ್ತೆ ಕಾಮಗಾರಿ ವೀಕ್ಷಣೆ

ಹಳೆಯ ಸುದ್ದಿ

WhatsApp Image 2026-03-09 at 12.51.01 AM
  • ಬೆಂಗಳೂರು

ಪರಿಸರ ಉಳಿಸುವುದು ನಮ್ಮ ಕರ್ತವ್ಯ- ರೇವತಿ ಕಾಮತ್

ಸಂಜೆ ಪ್ರಭ March 9, 2026
WhatsApp Image 2026-03-09 at 12.39.13 AM
  • ಬೆಂಗಳೂರು

ಗಾಂಧಿನಗರ ಹೊಸಕೆರೆಗೆ ಶೀಘ್ರ ಕಾಯಕಲ್ಪ ದೊರೆಯದಿದ್ದರೆ ಉಪವಾಸ ಸತ್ಯಾಗ್ರಹ-ಸ್ಥಳೀಯ ನಿವಾಸಿಗಳ ಆಕ್ರೋಶ

ಸಂಜೆ ಪ್ರಭ March 9, 2026
WhatsApp Image 2026-03-09 at 12.31.28 AM
  • ಉಡುಪಿ

ಉಡುಪಿ ಮಲಬಾರ್ ಗೋಲ್ದ್ ನಲ್ಲಿ ಮಹಿಳಾ ದಿನಾಚರಣೆ – ಸಾಧಕರಿಗೆ ಸನ್ಮಾನ

ಸಂಜೆ ಪ್ರಭ March 9, 2026
WhatsApp Image 2026-03-08 at 9.36.29 AM
  • ಉಡುಪಿ

ಎಂ.ಜಿ.ಎಂ. ಸಂಧ್ಯಾ ಕಾಲೇಜಿನಲ್ಲಿ ಐಟಿ ಕ್ಲಬ್ ಚಟುವಟಿಕೆಗಳ ಉದ್ಘಾಟನೆ

ಸಂಜೆ ಪ್ರಭ March 9, 2026
  • Facebook
  • X
  • YouTube
  • Instagram

Contact Us | About Us | Privacy Policy | Terms of Use

Address: Venkatesh Pai
No. 2068, 8th Main
‘E’ Block, Rajaji Nagar II Stage,
Bangalore – 560010
Karnataka
Email: sanjeprabha@gmail.com
Phone No: +91 98864 96677

[gigatech_copy_rights] | ReviewNews by AF themes.