ಸಂಜೆ ಪ್ರಭಷಉಡುಪಿ: ಮಹಾತ್ಮ ಗಾಂಧಿ ಮೆಮೋರಿಯಲ್ ಸಂಧ್ಯಾ ಕಾಲೇಜು, ಉಡುಪಿ ಇದರ ಐಟಿಕ್ಲಬ್ನ 2025–26ನೇ ಶೈಕ್ಷಣಿಕ ಸಾಲಿನ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವು ಮಾರ್ಚ್ 5ರಂದು ಮಧ್ಯಾಹ್ನ 2.15ಕ್ಕೆ ಟಿ. ಮೊಹನದಾಸ್ ಪೈ ಪ್ಲಾಟಿನಂ ಜ್ಯುಬಿಲಿ ಬ್ಲಾಕ್ ಸಭಾಂಗಣದಲ್ಲಿ ನಡೆಯಿತು.
ಕಾಲೇಜಿನ ಪ್ರಾಂಶುಪಾಲರಾದ ಡಾ.ದೇವಿದಾಸ್ ಎಸ್.ನಾಯಕ್ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ತಾಂತ್ರಿಕ ಹಾಗೂ ವಿಶ್ಲೇಷಣಾತ್ಮಕ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸಿಕೊಳ್ಳುವುದು ಇಂದಿನ ಐಟಿ ಕ್ಷೇತ್ರದಲ್ಲಿ ಅತ್ಯಂತ ಅಗತ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್, ಮಣಿಪಾಲದ ಆನ್ಲೈನ್ ಶಿಕ್ಷಣ ನಿರ್ದೇಶನಾಲಯದ ಎಂಸಿಎ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ಪೂರ್ಣಿಮಾ ಶೆಟ್ಟಿ ಅವರು “Data is the New Oil: Why Every BCA Student Must Understand Analytics” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.
ಬಿಸಿಎ ಸಂಯೋಜಕರಾದ ಡಾ.ಎಂ.ವಿಶ್ವನಾಥ ಪೈ ಅವರು ಕೃತಕ ಬುದ್ಧಿಮತ್ತೆಯ ಮಹತ್ವ ಮತ್ತು ಅದರ ಶಿಕ್ಷಣ, ವ್ಯಾಪಾರ ಹಾಗೂ ತಂತ್ರಜ್ಞಾನ ಕ್ಷೇತ್ರಗಳ ಮೇಲೆ ಇರುವ ಪ್ರಭಾವದ ಬಗ್ಗೆ ಮಾತನಾಡಿದರು.
ಬಿಬಿಎ ಮತ್ತು ಬಿಕಾಂ ಸಂಯೋಜಕರಾದ ಡಾ.ಮಲ್ಲಿಕಾ.ಎ.ಶೆಟ್ಟಿ, ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥೆ ಡಾ.ರೇಖಾ ಎನ್. ಚಂದ್ರ ಮುಂತಾದವರು ಉಪಸ್ಥಿತರಿದ್ದರು. ಐಟಿ ಕ್ಲಬ್ ಸಂಯೋಜಕಿ ಅಂಜಲಿನ್ ಜೊವಿಟಾ ಅತಿಥಿಗಳನ್ನು ಸ್ವಾಗತಿಸಿದರು. ಐಟಿ ಕ್ಲಬ್ ಕಾರ್ಯದರ್ಶಿ ದರ್ಶನ್ ಅತಿಥಿಗಳನ್ನು ಪರಿಚಯಿಸಿದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕಿ ಅನ್ವಿತಾ ವಂದನಾರ್ಪಣೆ ಸಲ್ಲಿಸಿದರು. ದ್ವಿತೀಯ ಬಿಸಿಎ ವಿದ್ಯಾರ್ಥಿನಿ ಉನ್ನತಿ ಕಾರ್ಯಕ್ರಮ ನಿರೂಪಿಸಿದರು.
